ಯೆಶಾಯ 64:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿಹೋಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು. ಅಧ್ಯಾಯವನ್ನು ನೋಡಿ |
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.