Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರವೂ ನೀರನ್ನು ಕುದಿಸುವ ಉರಿಯೋಪಾದಿಯಲ್ಲಿಯೂ [ನೀನು ಪ್ರತ್ಯಕ್ಷನಾಗಿ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ, ಬೆಂಕಿ ನೀರನ್ನು ಉಕ್ಕಿಸುವಂತೆಯೂ, ನೀನು ಇಳಿದುಬಂದು ನಿನ್ನ ಹೆಸರನ್ನು ನಿನ್ನ ವೈರಿಗಳಿಗೆ ತಿಳಿಯುವಂತೆ ಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:2
31 ತಿಳಿವುಗಳ ಹೋಲಿಕೆ  

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.


ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.


ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.


ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.


ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.


“ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!


ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.


ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು