ಯೆಶಾಯ 64:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ, ನಿಮ್ಮ ಮಾರ್ಗಗಳನ್ನು ಜ್ಞಾಪಕ ಮಾಡುವವನನ್ನೂ ನೀವು ಸಹಾಯಮಾಡಲು ಬರುತ್ತೀರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಆದ್ದರಿಂದ ನೀವು ಬೇಸರಗೊಂಡಿರುವಿರಿ. ಹಾಗಾದರೆ, ನಮ್ಮಂಥವರಿಗೆ ರಕ್ಷಣೆ ಇದೆಯೇ? ಅಧ್ಯಾಯವನ್ನು ನೋಡಿ |