Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ - ಇಗೋ, ನಾನಿದ್ದೇನೆ ನಾನಿದ್ದೇನೆ ಎನ್ನುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ, “ನನ್ನ ಆಲೋಚನೆಯನ್ನು ಕೇಳಲು ಬಾರದೆ ಹೋದ ಜನರಿಗೂ ನಾನು ಸಹಾಯ ಮಾಡಿದೆನು. ನನ್ನನ್ನು ಹುಡುಕದವರಿಗೂ ಸಿಕ್ಕಿದೆನು. ನನ್ನ ಹೆಸರನ್ನು ಧರಿಸದ ಜನಾಂಗದೊಡನೆ ನಾನು ಮಾತನಾಡಿದೆನು. ಅವರಿಗೆ, ‘ನಾನಿಲ್ಲಿದ್ದೇನೆ! ನಾನಿಲ್ಲಿದ್ದೇನೆ!’ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:1
20 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.


ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!


ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.


ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು