Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಜನರ ಹಿತಕ್ಕಾಗಿ ಶಾರೋನ್‍ಬಯಲು ಮಂದೆಗಳಿಗೆ ಹುಲ್ಲುಗಾವಲಾಗುವುದು; ಆಕೋರಿನ ಕಣಿವೆ ದನಕರುಗಳಿಗೆ ಕೊಟ್ಟಿಗೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:10
13 ತಿಳಿವುಗಳ ಹೋಲಿಕೆ  

ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.


ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,


ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು