Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ಹೇಳಿದನು: “ನನ್ನ ಸೇವಕರು ಊಟಮಾಡುವರು. ಆದರೆ ದುಷ್ಟಜನರಾದ ನೀವು ಹಸಿದವರಾಗಿರುವಿರಿ. ನನ್ನ ಸೇವಕರು ಕುಡಿಯುವರು. ಆದರೆ ದುಷ್ಟಜನರಾದ ನೀವು ಬಾಯಾರಿದ್ದೀರಿ. ನನ್ನ ಸೇವಕರು ಸಂತೋಷದಲ್ಲಿರುವರು. ದುಷ್ಟಜನರಾದ ನೀವಾದರೋ ನಾಚಿಕೆಗೆ ಒಳಗಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗಿರುವುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಸೇವಕರು ತಿನ್ನುವರು. ಆದರೆ ನೀವು ಹಸಿದಿರುವಿರಿ. ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿ ಇರುವಿರಿ. ಇಗೋ, ನನ್ನ ಸೇವಕರು ಸಂತೋಷಪಡುವರು, ಆದರೆ ನೀವು ನಾಚಿಕೆ ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:13
23 ತಿಳಿವುಗಳ ಹೋಲಿಕೆ  

ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.


ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.


ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ.


ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.


ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು