ಯೆಶಾಯ 65:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಈ ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನಾನು ಹೊಸ ಆಕಾಶವನ್ನೂ, ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ. ಅಧ್ಯಾಯವನ್ನು ನೋಡಿ |