Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, ಎಂದೆಂದಿಗೂ ಉಲ್ಲಾಸಪಡಿರಿ. ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:18
26 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.


ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.


ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು