Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಪೂರಾ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ, ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತವೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:22
12 ತಿಳಿವುಗಳ ಹೋಲಿಕೆ  

ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು.


ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು