ಯೆಶಾಯ 65:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ತೋಳವು ಕುರಿಯ ಸಂಗಡ ಮೇಯುವದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಹಾವಿಗೆ ದೂಳೇ ಆಹಾರವಾಗುವದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡುಮಾಡುವದಿಲ್ಲ, ಯಾರೂ ಹಾಳುಮಾಡುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.