ಯೆಶಾಯ 65:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಹೇಳುವುದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು. ಅಧ್ಯಾಯವನ್ನು ನೋಡಿ |