Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:14
27 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.


ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.


ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.


ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.


ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.


ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.


ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,


ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.


ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.


ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.


ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು