Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:18
44 ತಿಳಿವುಗಳ ಹೋಲಿಕೆ  

ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


“ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.


ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?


ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?


ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.


ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.


“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.


ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.


ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


“ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.


ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.


ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.


ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.


ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.


ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.


ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು