Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:19
48 ತಿಳಿವುಗಳ ಹೋಲಿಕೆ  

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.


“ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ.


ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!


ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


“‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”


ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.


“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!


ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.


ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.


ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,


ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.


ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.


ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಮಿಚ್ರಯಿಮ್ಯರಿಂದ ಲೂದ್ಯರೂ, ಅನಾಮ್ಯರೂ, ಲೆಹಾಬ್ಯರೂ, ನಫ್ತುಹ್ಯರೂ,


ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.


ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.


ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.


ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!


ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.


ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.


ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು.


ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು