Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ಯರು ಯೆಹೋವನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಾಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧ ಪರ್ವತಕ್ಕೆ ಕರತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:20
20 ತಿಳಿವುಗಳ ಹೋಲಿಕೆ  

ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.


ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,


ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.


ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.


ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು