Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಇವರಲ್ಲಿ ಯಾಜಕರೂ ಲೇವಿಯರೂ ಆಗತಕ್ಕವರನ್ನು ಆರಿಸಿಕೊಳ್ಳುವೆನು ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸುವೆನು.” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾಗಿಯೂ ಅವರಿಂದ ತೆಗೆದುಕೊಳ್ಳುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:21
10 ತಿಳಿವುಗಳ ಹೋಲಿಕೆ  

ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು