ಯೆಶಾಯ 66:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.” ಅಧ್ಯಾಯವನ್ನು ನೋಡಿ |