ಯೆಶಾಯ 66:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು, ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು. ಏಕೆಂದರೆ ನಾನು ಕೂಗಿದಾಗ, ಯಾರು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ, ಇವರು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.” ಅಧ್ಯಾಯವನ್ನು ನೋಡಿ |
ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.