Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:5
32 ತಿಳಿವುಗಳ ಹೋಲಿಕೆ  

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.


ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.


ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.


ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.


ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.


ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.


ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.


“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.


ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು