ಯೆಶಾಯ 66:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ. “ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರಸವಕ್ಕೆ ತಂದ ನಾನು ಹೆರಲಿಕ್ಕೆ ಬಿಡದಿರುವೆನೊ?’ - ಎನ್ನುತ್ತಾರೆ ನಿಮ್ಮ ದೇವರು. ‘ಹೆರುವಂತೆ ಮಾಡುವವನಾದ ನಾನು ಗರ್ಭ ಮುಚ್ಚಿಬಿಡುವೆನೊ?’ ಎನ್ನುತ್ತಾರೆ ಸ್ವಾಮಿ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವಿಸಗೊಡದೆ ಹೋದೇನೋ ಎಂದು ಯೆಹೋವನು ಹೇಳುತ್ತಾನೆ. ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ ಎಂದು ನಿನ್ನ ದೇವರು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದೇ ರೀತಿಯಲ್ಲಿ ಹೊಸದಾಗಿ ಹುಟ್ಟುವ ಕಾರಣದಿಂದಲೇ ನಾನು ಬೇನೆಯನ್ನು ನಿಮಗೆ ಕೊಡುವೆನು.” ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೆ ಹೆರಿಗೆ ಬೇನೆಯನ್ನು ಕೊಡದೆಹೋದರೆ ನೀವು ಹೊಸ ಜನಾಂಗವಾಗಲಾರಿರಿ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಪ್ರಸವಕ್ಕೆ ತಂದಮೇಲೆ ಹೆರಿಗೆಯಾಗದಂತೆ ತಡೆಯುವೆನೋ?” ಎಂದು ಯೆಹೋವ ದೇವರು ಹೇಳುತ್ತಾನೆ. “ನಾನು ಪ್ರಸವಕ್ಕೆ ತಂದಮೇಲೆ, ಪ್ರಸವವಾಗದೆ ಇರಲು ಗರ್ಭ ಮುಚ್ಚಿಬಿಡುವೆನೇ?” ಎಂದು ನಿನ್ನ ದೇವರು ಕೇಳುತ್ತಾನೆ. ಅಧ್ಯಾಯವನ್ನು ನೋಡಿ |