ಯೆಶಾಯ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಪೆಕಹ ಎಂಬವರು ಯೆರೂಸಲೇವಿುನ ಮೇಲೆ ದಂಡೆತ್ತಿ ಬಂದರು. (ಅದನ್ನು ಜಯಿಸುವದಕ್ಕೆ ಆಗಲಿಲ್ಲ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಹಾಜನು ಯೋಥಾಮನ ಮಗನು. ಯೋಥಾಮನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿ |