Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು.” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಅವನಿಗೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:11
18 ತಿಳಿವುಗಳ ಹೋಲಿಕೆ  

ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.


ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.


ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.


ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,


ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.


ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು.


“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.


ಮತ್ತೆ ಯೆಹೋವನು ಆಹಾಜನಿಗೆ,


ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.


ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು