ಯೆಶಾಯ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.