ಯೆಶಾಯ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಲ್ಲಿನ ನೊಣಗಳೂ ಅಶ್ಶೂರ್‍ದೇಶದ ತುಂಬಿಗಳೂ ಬರಲೆಂದು ಯೆಹೋವನು ಸಿಳ್ಳುಹಾಕುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿ |