Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯುದ್ಧ ಮಾಡಲು ಯೋಜನೆ ಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ ಸೈನ್ಯಕ್ಕೆ ಆಜ್ಞೆಕೊಡಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:10
40 ತಿಳಿವುಗಳ ಹೋಲಿಕೆ  

ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”


ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.


ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.


ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.


ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.


ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”


ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.


ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.


ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.


ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.


ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.


ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.


ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು