Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವರು ಯಾವದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ, ನೀವು ಅದನ್ನು ಒಳಸಂಚು ಎಂದು ಹೇಳಬೇಡಿರಿ. ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:12
13 ತಿಳಿವುಗಳ ಹೋಲಿಕೆ  

ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.


ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು