Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಕರ್ತನು ಪೂರ್ಣಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:7
38 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.


ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.


ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.


ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”


ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.


ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.


ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.


ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.


ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.


ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.


ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.


ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.


ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.


ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.


ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.


ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.


ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು