ಯೆಶಾಯ 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಫ್ರಯಿಮ್ ಜನರಿಗೂ ಸಮಾರ್ಯದ ನಿವಾಸಿಗಳಿಗೂ ಅದು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವದಾರುಗಳನ್ನು ಹಾಕುವೆವು ಎಂದು ಗರ್ವದಿಂದಲೂ ಉಬ್ಬಟೆಯಿಂದಲೂ ಹೇಳಿಕೊಳ್ಳುವ ಎಫ್ರಾಯೀಮ್ಯರು ಸಮಾರ್ಯದ ನಿವಾಸಿಗಳು ಇವರೆಲ್ಲರಿಗೂ ಆ ಮಾತು ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಇಟ್ಟಿಗೆಗಳು ಬಿದ್ದು ಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿಮರಗಳನ್ನು ಕಡಿದಿದ್ದರೂ ಅಲ್ಲಿಯೇ ನಾವು ದೇವದಾರು ವೃಕ್ಷಗಳನ್ನು ನೆಡುವೆವು,” ಅಧ್ಯಾಯವನ್ನು ನೋಡಿ |