Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ವಾಮಿಯು ರೆಚೀನನ ಶತ್ರುಗಳನ್ನು ಅವರ ವಿರುದ್ಧವಾಗಿ ಎತ್ತಿಕಟ್ಟಿರುವರು. ಅವರ ಮುಂದೆ ಸೀರಿಯರನ್ನು, ಅವರ ಹಿಂದೆ ಫಿಲಿಷ್ಟಿಯರನ್ನು - ಹೀಗೆ ಎಲ್ಲಾ ಶತ್ರುಗಳನ್ನು ಎಬ್ಬಿಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಹೆಚ್ಚಿಸಿದ್ದಾನೆ; ಅವರ ಮುಂದೆ ಅರಾಮ್ಯರನ್ನು ಅವರ ಹಿಂದೆ ಫಿಲಿಷ್ಟಿಯರನ್ನು ಅಂತು ಅವನ ಶತ್ರುಗಳನ್ನೆಲ್ಲಾ ಎಬ್ಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗಿರುವುದರಿಂದ ಯೆಹೋವ ದೇವರು ರೆಚೀನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:11
10 ತಿಳಿವುಗಳ ಹೋಲಿಕೆ  

ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.


ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.


ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು