Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:12
25 ತಿಳಿವುಗಳ ಹೋಲಿಕೆ  

ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್‌, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.


ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.


ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.


ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.


“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.


“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”


ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು