ಯೆಶಾಯ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ. ಅಧ್ಯಾಯವನ್ನು ನೋಡಿ |