Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದು ಬಿಡುತ್ತದೆ, ಈ ಎರಡೂ ಯೆಹೂದಕ್ಕೆ ವಿರುದ್ಧವಾಗಿವೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:21
15 ತಿಳಿವುಗಳ ಹೋಲಿಕೆ  

ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.


ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ಕೂಡಲೆ ಯೆಹೂದಕ್ಕೂ, ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು “ಒಗ್ಗಟ್ಟು” ಎಂಬ ನನ್ನ ಎರಡನೆಯ ಕೋಲನ್ನು ಮುರಿದುಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು