Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಕೋಬ ಕುಲದವರಿಗೆ‍ ಶಾಪದ ಸಂದೇಶ ಒಂದನ್ನು ಸರ್ವೇಶ್ವರ ಕಳುಹಿಸಿರುವರು. ಅದು ಇಸ್ರಯೇಲರ ಮೇಲೆ ಎರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನು ಯಾಕೋಬ್ಯರಿಗೆ ವಿರುದ್ಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರಿಗೆ ತಗಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಯಾಕೋಬನಿಗೆ ವಿರೋಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದರು, ಅದು ಇಸ್ರಾಯೇಲರಿಗೆ ತಗುಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:8
10 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು