Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಜೀವಿಗಳ ಮಧ್ಯದಲ್ಲಿ ಅದ್ಭುತ ಕಾಂತಿಯು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ, ವಿುಂಚುಗಳು, ಹೊರಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಬೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಬೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:13
11 ತಿಳಿವುಗಳ ಹೋಲಿಕೆ  

ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.


ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;


ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.


ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.


“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು