Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವು ಮುಂದರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯ ಹಾಗೆ, ಆರ್ಭಟಿಸುವ ಸೈನ್ಯದ ಕೋಲಾಹಲದೋಪಾದಿಯಲ್ಲಿ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಬ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಬ್ದದಂತಿತ್ತು. ಸರ್ವಶಕ್ತನಾದ ದೇವರ ಶಬ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಬ್ದದಂತಿತ್ತು. ಜೀವಿಗಳು ಚಲಿಸುವುದನ್ನು ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾರ್ಶ್ವಗಳಲ್ಲಿ ಕೆಳಗಿಳಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:24
12 ತಿಳಿವುಗಳ ಹೋಲಿಕೆ  

ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.


ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು.


ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.


ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.


ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ!


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,


ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು