Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆ; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆ; ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಸುತ್ತಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಆತನ ಸೊಂಟದ ಮೇಲ್ಭಾಗವನ್ನು ನೋಡಿದಾಗ, ಆತನು ಬೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನ್ನು ನೋಡಿದಾಗ ಆತನು ಬೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಬೆಳಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:27
11 ತಿಳಿವುಗಳ ಹೋಲಿಕೆ  

ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.


ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.


ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.


ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು