Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸ್ವರವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:28
30 ತಿಳಿವುಗಳ ಹೋಲಿಕೆ  

ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.


ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,


ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.


ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.


ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.


ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.


ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.


ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.


ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.


ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.


ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.


ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು