ಯೆಹೆಜ್ಕೇಲನು 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಗೋ, ನಾನು ನೋಡಿದೆನು; ಬಡಗಲಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲು ವಿುಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣಕಾಂತಿಯಂಥ ಕಾಂತಿಯು ಉಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೊ ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು. ಅಧ್ಯಾಯವನ್ನು ನೋಡಿ |
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.