ಯೆಹೆಜ್ಕೇಲನು 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಮೂಡಣಬಾಗಿಲ ಮುಂದೆ ನಿಂತವು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಹಾರಿದವು. ಅವು ಆಲಯವನ್ನು ಬಿಟ್ಟುಹೋಗುವದನ್ನು ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಬಾಗಿಲ ಬಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ನೋಡುವಾಗಲೇ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿಕೊಂಡು, ಭೂಮಿಯನ್ನು ಬಿಟ್ಟು ಮೇಲಕ್ಕೇರಿ ಹೋದರು. ಅವು ಹೊರಟಾಗ, ಚಕ್ರಗಳೂ ಅದರ ಸಂಗಡ ಇದ್ದವು. ಅವರು ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಇಸ್ರಾಯೇಲಿನ ದೇವರ ಮಹಿಮೆಯು ಅವರ ಮೇಲೆ ಇತ್ತು. ಅಧ್ಯಾಯವನ್ನು ನೋಡಿ |