Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು. ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿಯಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಕೆಬಾರ್ ನದಿಯ ಬಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿದೂತರೇ ಎಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ. ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:20
8 ತಿಳಿವುಗಳ ಹೋಲಿಕೆ  

ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.


ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.


ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು.


ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.


ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು