Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:22
9 ತಿಳಿವುಗಳ ಹೋಲಿಕೆ  

ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.


ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು.


ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.


ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು