Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇಬೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:21
23 ತಿಳಿವುಗಳ ಹೋಲಿಕೆ  

ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”


ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”


ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.


ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


“ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,


ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.


ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು