ಯೆಹೆಜ್ಕೇಲನು 11:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಮೇಲೆ ದೇವರಾತ್ಮವು ಪರವಶನಾದ ನನ್ನನ್ನು ಎತ್ತಿ ದಿವ್ಯದರ್ಶನದ ಮುಖಾಂತರ ಕಸ್ದೀಯ ದೇಶದಲ್ಲಿ ಸೆರೆಯಾದವರ ಬಳಿಗೆ ಒಯ್ದುಕೊಂಡು ಬಂತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ಆತ್ಮವು ನನ್ನನ್ನು ಆಕಾಶಕ್ಕೆ ಎತ್ತಿ ಬಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆ ಒಯ್ಯಲ್ಪಟ್ಟಿದ್ದ ಜನರ ಮಧ್ಯೆ ನಾನು ಬಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನ್ನು ಕಂಡೆನು. ಬಳಿಕ, ನಾನು ಕಂಡ ಆ ದರ್ಶನವು ನನ್ನನ್ನು ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು. ಅಧ್ಯಾಯವನ್ನು ನೋಡಿ |