Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತವ್ಯೂಹಗಳವರನ್ನೂ ನಾನು ಎಲ್ಲ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನ ಸುತ್ತಲೂ ಇರುವವರನ್ನೆಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿಬಿಡುವೆನು. ಅವನ ಕೆಲಸಗಾರರನ್ನು ಮತ್ತು ಅವನ ಸೈನ್ಯವನ್ನು ಗಾಳಿಗೆ ತೂರಿಬಿಡುವೆನು. ಮತ್ತು ಅವರನ್ನು ಖಡ್ಗದೊಡನೆ ಬೆನ್ನಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:14
10 ತಿಳಿವುಗಳ ಹೋಲಿಕೆ  

ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,


ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.


ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು