ಯೆಹೆಜ್ಕೇಲನು 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಕೆಲವರನ್ನು ಖಡ್ಗ ಕ್ಷಾಮವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವದಕ್ಕೆ ಅವಕಾಶಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿ |