ಯೆಹೆಜ್ಕೇಲನು 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿನ ಜೆರುಸಲೇಮ್ ನಿವಾಸಿಗಳನ್ನೂ ಕುರಿತು ಇಂತೆನ್ನುತ್ತಾರೆ: ‘ಅವರು ಅನ್ನವನ್ನು ಅಂಜಿಕೆಯಿಂದ ತಿಂದು ನೀರನ್ನು ನಡುಕದಿಂದ ಕುಡಿಯುವರು: ಏಕೆಂದರೆ ಆ ನಾಡಿನಲ್ಲಿರುವವರು ಹಿಂಸಾಚಾರಿಗಳು; ಈ ಕಾರಣ, ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ನಾಡು ಬರಿದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈ ದೇಶದಲ್ಲಿರುವ ಜನರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇವಿುನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ - ಅವರು ಅನ್ನವನ್ನು ಬೆದರಿನಿಂದ ತಿಂದು ನೀರನ್ನು ಬೆರಗಿನಿಂದ ಕುಡಿಯುವರು; ಏಕಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ ದೇಶವು ಬರಿದಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿನ್ನ ದೇಶದ ಜನರಿಗೆ ಹೀಗೆ ಹೇಳು, ‘ಯೆರೂಸಲೇಮಿನ ನಿವಾಸಿಗಳಿಗೆ ಮತ್ತು ಇಸ್ರಾಯೇಲರ ದೇಶಕ್ಕೆ ಸಾರ್ವಭೌಮ ಯೆಹೋವ ದೇವರು ಹೇಳಿದ್ದೇನೆಂದರೆ, ಅವರು ತಮ್ಮ ರೊಟ್ಟಿಯನ್ನು ಎಚ್ಚರಿಕೆಯಿಂದಲೇ ತಿನ್ನುವರು, ನೀರನ್ನು ಅಂಜಿಕೆಯಿಂದಲೇ ಕುಡಿಯುವರು. ಅದರಲ್ಲಿ ವಾಸವಾಗಿರುವವರೆಲ್ಲರ ಹಿಂಸಾಚಾರದಿಂದ ಅವರ ದೇಶವು ಸೊತ್ತನ್ನೆಲ್ಲಾ ಕಳೆದುಕೊಂಡು ಹಾಳಾಗುವುದು. ಅಧ್ಯಾಯವನ್ನು ನೋಡಿ |