Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಗಾದೆಯನ್ನು ನಿಲ್ಲಿಸಿ ಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ - ಕ್ಲುಪ್ತಕಾಲವು ಹತ್ತಿರಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವದು ಸಮೀಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವುದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು: ‘ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:23
13 ತಿಳಿವುಗಳ ಹೋಲಿಕೆ  

ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’


ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


“ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು