Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು; ಇದು ಕರ್ತನಾದ ಯೆಹೋವನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:25
20 ತಿಳಿವುಗಳ ಹೋಲಿಕೆ  

ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.


“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”


ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.


ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.


ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.


ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು