Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು ನಿನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೊ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ನಿನ್ನ ಸಾಮಾನನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಈಚೆಗೆ ಹಾಕಿ ವಲಸೆಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನ್ನ ಚೀಲಗಳನ್ನು ಹೊರಗೆ ತೆಗೆದುಕೊಂಡು ಬಾ. ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಅವುಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು. ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:4
5 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’


ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.


ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.


ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು