ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.
ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”